ADVERTISEMENT

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಸ್ತರದ ಭದ್ರತೆ

ಪಿಟಿಐ
Published 6 ಅಕ್ಟೋಬರ್ 2024, 10:02 IST
Last Updated 6 ಅಕ್ಟೋಬರ್ 2024, 10:02 IST
<div class="paragraphs"><p>ಮತ ಚಲಾಯಿಸಿದ ಬಳಿಕ ಮಸಿ ಹಚ್ಚಿದ ಬೆರಳು ತೋರಿಸಿದ ವೃದ್ಧೆ</p></div>

ಮತ ಚಲಾಯಿಸಿದ ಬಳಿಕ ಮಸಿ ಹಚ್ಚಿದ ಬೆರಳು ತೋರಿಸಿದ ವೃದ್ಧೆ

   

– ಪಿಟಿಐ ಚಿತ್ರ

ಶ್ರೀನಗರ: ಸಂವಿಧಾನ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರಿ ಭದ್ರತೆ ಏರ್ಪಡಿಸಲಾಗಿದೆ.

ADVERTISEMENT

ಒಟ್ಟು 20 ಮತ ಎಣಿಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಮೂರು ಸ್ತರದ ಭದ್ರತೆ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅಧಿಕೃತ ಚುನಾವಣಾ ಏಜೆಂಟ್‌ಗಳು, ಅಭ್ಯರ್ಥಿಗಳು ಹಾಗೂ ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶವಿಲ್ಲ. ಪ್ರತೀ ಹಂತದ ಮತ ಎಣಿಕೆ ಬಳಿಕ ಅಭ್ಯರ್ಥಿಗಳು ‍ಪಡೆದ ಮತಗಳ ಸಂಖ್ಯೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಘೋಷಣೆ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.

2014ರ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, 3 ಹಂತಗಳಲ್ಲಿ ಮತದಾನ ನಡೆದಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಹಾಗೂ ಅಕ್ಟೋಬರ್ 5ರಂದು ಮತದಾನ ನಡೆದಿತ್ತು. ಒಟ್ಟು ಶೇ 63.45ರಷ್ಟು ಮತ ಚಲಾವಣೆಯಾಗಿದೆ. 2014ರಲ್ಲಿ ಶೇ 65.52ರಷ್ಟು ಮತದಾನವಾಗಿತ್ತು.

ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆದಿದ್ದು, 873 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.