ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಜಮ್ಮು ಮತ್ತು ಕಾಶ್ಮೀರವು ಶಾಂತಿ ಹಾಗೂ ಅಭಿವೃದ್ಧಿಯ ಹೊಸ ಯುಗ ಕಾಣುತ್ತಿದ್ದು, ಉಗ್ರವಾದಿಗಳ ತಾಣ ಈಗ ಪ್ರವಾಸೋದ್ಯಮದ ತಾಣವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಎರಡು ದಿನಗಳ ಪ್ರವಾಸಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವ ಮುನ್ನ ಅವರು ಈ ಬಗ್ಗೆ ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.
‘ಮೋದಿ ಸರ್ಕಾರದ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ. ಈ ಪ್ರದೇಶವು ಶೈಕ್ಷಣಿಕ ಮತ್ತು ಆರ್ಥಿಕ ಚಟುವಟಿಕೆಗಳ ಹೆಚ್ಚಳದೊಂದಿಗೆ ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ರೂಪಾಂತರಗೊಂಡಿದೆ’ ಎಂದು ಬರೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕರ್ತರ ಸಮ್ಮೇಳನದಲ್ಲಿ ಸಂವಾದ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.