ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ (ಜೆಇಎಂ) ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಸೋಪೋರ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಇಬ್ಬರು ಜೆಇಎಂ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ನಾಗರಿಕರ ಮೇಲೆ ದಾಳಿ ನಡೆಸಲು ಹೊಂಚು ಹಾಕಿದ್ದರು. ಎನ್‌ಕೌಂಟರ್ ವೇಳೆ ಓರ್ವ ನಾಗರಿಕ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರನ್ನು ಸೋಪೋರ್‌ನ ಮೊಹಮ್ಮದ್ ರಫಿ ಮತ್ತು ಪುಲ್ವಾಮದ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.