ಜಮ್ಮು:ಜಮ್ಮು ಮತ್ತು ಕಾಶ್ಮೀರದ ಗಡಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಉಗ್ರರು ಪದೇ ಪದೇ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಜಮ್ಮುವಿನ ಬಸ್‌ನಿಲ್ದಾಣದಲ್ಲಿ ಗುರುವಾರ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟು, 30 ಜನ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬಸ್‌ನಿಲ್ದಾಣದಲ್ಲಿ ಗ್ರೆನೇಡ್ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಲ್ಬಾಗ್ ಸಿಂಗ್ ತಿಳಿಸಿದ್ದಾರೆ.
ಘಟನೆಯಲ್ಲಿ 28 ಜನ ಗಾಯಗೊಂಡಿದ್ದಾಗಿ ಎಎನ್‌ಐ ಟ್ವಿಟ್ ಮಾಡಿದೆ.
ಜಮ್ಮು ಬಸ್‌ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸುಮಾರು 18 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಮ್ಮು ಐಜಿಪಿ ಎಂ.ಕೆ. ಸಿನ್ಹಾ ತಿಳಿಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.
ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸ್ ಹಾಗೂ ಭದ್ರತಾಪಡೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.