ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಯ ಯೋಧರುಇಬ್ಬರು ಭಯೋತ್ಪಾದಕರ ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು(ಸೋಮವಾರ)ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಾಧಿಕಾರಿವಿಜಯ್ ಕುಮಾರ್ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿತ್ತು.
34 ರಾಷ್ಟ್ರೀಯ ರೈಫಲ್ಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.