ADVERTISEMENT

Jammu & Kashmir Assembly Polls: ಸಂಜೆ 5 ಗಂಟೆಗೆ ಶೇ 58.19ಷ್ಟು ಮತದಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2024, 6:47 IST
Last Updated 18 ಸೆಪ್ಟೆಂಬರ್ 2024, 6:47 IST
<div class="paragraphs"><p>ಮತದಾರರು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ</p></div>

ಮತದಾರರು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ

   

–ಪಿಟಿಐ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ 24 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆ ವೇಳೆಗೆ ಶೇ 58.19ಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ADVERTISEMENT

ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ 77.23ರಷ್ಟು ಮತದಾನವಾಗಿದ್ದರೆ, ಪುಲ್ವಾಮಾ ಜಿಲ್ಲೆಯಲ್ಲಿ ಅತಿ ಕಡಿಮೆ ಶೇ 43.87ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.

ದೋಡಾ ಜಿಲ್ಲೆಯಲ್ಲಿ ಶೇ 69.33ರಷ್ಟು, ರಾಂಬನ್ ಜಿಲ್ಲೆಯಲ್ಲಿ ಶೇ 67.71ರಷ್ಟು, ಕುಲ್ಗಾಮ್‌ ಜಿಲ್ಲೆಯಲ್ಲಿ ಶೇ 59.62ರಷ್ಟು, ಶೋಪಿಯಾನ್ ಜಿಲ್ಲೆಯಲ್ಲಿ ಶೇ 53.64ರಷ್ಟು ಅನಂತನಾಗ್ ಜಿಲ್ಲೆಯಲ್ಲಿ ಶೇ 54.17ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಶೇ 32ರಷ್ಟು ಮತ್ತು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ 50.65ರಷ್ಟು ಮತದಾನವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಕಿಶ್ತ್ವಾರ್ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿ ಗೊಂದಲ ಉಂಟಾದ ಪರಿಣಾಮ ಮತದಾನವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಉಳಿದಂತೆ ಎಲ್ಲೆಡೆ ಶಾಂತಿಯುತ ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 7.14 ಲಕ್ಷಕ್ಕೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ.

ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಕಣಿವೆ ರಾಜ್ಯಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.