ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷವು (ಪಿಡಿಪಿ) ಮಾಜಿ ಉಗ್ರರ ಬೆಂಬಲ ಪಡೆದಿವೆ. ಜತೆಗೆ, ಎರಡು ಪಕ್ಷಗಳು ಕೇಂದ್ರಾಡಳಿತ ಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಯಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಬುಧವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾರಿಯ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಮನೆಗೆ ಕಳುಹಿಸಬೇಕಿದೆ’ ಎಂದು ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿರುವ ಮಾಧವ್ ಗುಡುಗಿದ್ದಾರೆ.
‘ಮಾಜಿ ಉಗ್ರರು ಎನ್‌ಸಿ ಮತ್ತು ಪಿಡಿಪಿ ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ ಎಂಬ ಮಾಹಿತಿ ನನಗಿದೆ. ಕಾಶ್ಮೀರವನ್ನು ಮತ್ತೆ ಕೆಟ್ಟ ದಿನಗಳಿಗೆ ಕೊಂಡೊಯ್ಯಲು ಬಯಸುತ್ತಿರುವ ಪಕ್ಷಗಳನ್ನು ಜನರು ಸೋಲಿಸಬೇಕು. ಅದೇ ರೀತಿ ಶಾಂತಿ ಮತ್ತು ಪ್ರಗತಿಯನ್ನು ಬಯಸುವ ಹೊಸ ನಾಯಕತ್ವವನ್ನು ಬೆಂಬಲಿಸಬೇಕು’ ಎಂದು ಮಾಧವ್ ಒತ್ತಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು 90 ಸದಸ್ಯರ ಬಲವನ್ನು ಹೊಂದಿದ್ದು, ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.