ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಸೋಮವಾರ ಬೆಳಿಗ್ಗೆನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆ ಹತ್ಯೆಗೈದಿದೆ.
ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಪ್ವಾರದ ಸಫಾವಾಲಿಗೆ ಚಿಕಿತ್ಸೆಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹತ್ಯೆಯಾದ ಉಗ್ರರ ಬಳಿಯಿದ್ದ ಎಕೆ–47 ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುಂಡಿನ ಚಕಮಕಿ ಮುಂದುವರೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.