ಜಮ್ಮು: ಜಮ್ಮು ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ಡ್ರೋನ್ ಅನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಹೊಡೆದುರುಳಿಸಿ, ಅದರಿಂದ ಐದು ಕೆಜಿ ತೂಕದ ಐಇಡಿ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಕಂಚಕ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯ ಪಡೆ (ಕ್ಯುಆರ್‌ಟಿ)ಯವರು, ಸ್ಪೋಟಕ ಸಾಗಿಸುತ್ತಿದ್ದ ಡ್ರೋನ್ ಹೊಡೆದುಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಪೋಟಕಗಳನ್ನು ಹೊತ್ತ ಡ್ರೋನ್, ಅಂತರರಾಷ್ಟ್ರೀಯ ಗಡಿಯಲ್ಲಿ 7 ರಿಂದ 8 ಕಿಲೋಮೀಟರ್ ಒಳಭಾಗದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಬಾರಾಮುಲ್ಲಾದಲ್ಲಿ ಎನ್ಕೌಂಟರ್; ಇಬ್ಬರು ಉಗ್ರರ ಹತ್ಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.