ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳು ಕಾಶ್ವಾದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಉಗ್ರನೊಬ್ಬ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.
ಭೂಗತ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಉಗ್ರಗಾಮಿ ಅನಾಯತ್ ಅಶ್ರಫ್ ದರ್ ಕಳೆದ ರಾತ್ರಿ ನಾಗರಿಕರೊಬ್ಬರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದ. ಮೂಲಗಳಿಂದ ಮಾಹಿತಿ ದೊರೆಯುತ್ತಿದ್ದಂತೆ ಶೋಫಿಯಾನ್‌ನ ಕಾಶ್ವಾ ಪ್ರದೇಶವನ್ನು ಸುತ್ತವರಿದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು.
ಉಗ್ರನಿಗೆ ಶರಣಾಗುವಂತೆ ಸೂಚಿಸಿದರೂ ಆತ ಮುಂದಾಗಲಿಲ್ಲ. ಅನಂತರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದವು ಎಂದು ತಿಳಿದು ಬಂದಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟಿಸಿದೆ.
ಸ್ಥಳದಿಂದ ಒಂದು ಪಿಸ್ತೂಲು ಮತ್ತು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಗಾಯಗೊಂಡಿರುವ ನಾಗರಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.