ADVERTISEMENT

ಭದ್ರತೆ ಒದಗಿಸದ ಸರ್ಕಾರ: ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ ಕೆಲಕಾಲ ಸ್ಥಗಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜನವರಿ 2023, 9:07 IST
Last Updated 27 ಜನವರಿ 2023, 9:07 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ    

ನದೆದೆಹಲಿ: ಕಾಶ್ಮೀರದ ಬನಿಹಾಲ್‌ನಲ್ಲಿ ಭದ್ರತಾ ಲೋಪದಿಂದಾಗಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಭದ್ರತಾ ಲೋಪದಿಂದಾಗಿ ಯಾತ್ರೆಯನ್ನು 20 ನಿಮಿಷ ಸ್ಥಗಿತಗೊಳಿಸಲಾಗಿತ್ತು. ಬಳಿಕ ಯಾತ್ರೆ ಮತ್ತೆ ಆರಂಭಿಸಲಾಯಿತು ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಭಾರತ್ ಜೋಡೊ ಯಾತ್ರೆಗೆ ಭದ್ರತೆ ಒದಗಿಸಲು ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಜಮ್ಮು –ಕಾಶ್ಮೀರದ ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಜ.19ರಂದು ಕಾಶ್ಮೀರಕ್ಕೆ ಪ್ರವೇಶಿಸಿತ್ತು. ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.