ಹೈದರಾಬಾದ್: ತೆಲುಗು ನಟ ಹಾಗೂ ಜನಸೇನಾ ಪಕ್ಷದ (ಜೆಎಸ್‌ಪಿ) ಮುಖ್ಯಸ್ಥ ಪವನ್ ಕಲ್ಯಾಣ್ ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಪೀಠಾಪುರಂ ವಿಧಾನಸಭಾ ಕ್ಷೇತ್ರವು ಕಾಕಿನಾಡ ಜಿಲ್ಲೆಗೆ ಸೇರಿದೆ. ಪ್ರಸ್ತುತ ಈ ಕ್ಷೇತ್ರವನ್ನು ವೈಎಸ್‌ಆರ್‌ಸಿ ಶಾಸಕ ಪ್ರತಿನಿಧಿಸುತ್ತಿದ್ದಾರೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗಾಜುವಾಕ ಮತ್ತು ಭೀಮಾವರಂ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಿ ಸೋತಿದ್ದರು.
ಪವನ್ ಕಲ್ಯಾಣ್ ಅವರ ಜನಸೇನಾ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿದ್ದು ಲೋಕಸಭೆ ಮತ್ತು ವಿಧಾನಸಭೆಗೆ ಸೀಟು ಹಂಚಿಕೆ ಮಾಡಿಕೊಂಡಿವೆ.
ವಿಧಾನಸಭೆಯಲ್ಲಿ ಟಿಡಿಪಿ 144, ಜನಸೇನಾ 21 ಮತ್ತು ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಲೋಕಸಭೆಯಲ್ಲಿ ಟಿಡಿಪಿ 17, ಬಿಜೆಪಿ 6, ಜನಸೇನಾ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿವೆ.
ಆಂಧ್ರಪ್ರದೇಶವು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.