ನವದೆಹಲಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರೂ ಆಗಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚಿಸಿದರು.
ಶಾ ಅವರ ಆಹ್ವಾನದ ಮೇರೆಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ ಎಂದು ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಲೋಕಸಭಾ ಹಾಗೂ ರಾಜ್ಯಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿ ನಾಯಕರು ಮನವಿ ಮಾಡಿದ್ದರು. ಆದರೆ, ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗಾಲಿ ಮತ ಚಲಾಯಿಸಿದ್ದರು.
‘ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಶಾ ಅವರು ಗಾಲಿ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.