ನವದೆಹಲಿ: ಜಾರ್ಖಂಡ್‌ನಲ್ಲಿ ಇದೇ ಮೊದಲ ಬಾರಿಗೆ ಎಚ್3ಎನ್2 ವೈರಸ್ ಸೋಂಕಿನ ಎರಡು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶೀತ ಮತ್ತು ಜ್ವರದ ಲಕ್ಷಣ ಹೊಂದಿರುವ 68 ವರ್ಷದ ವೃದ್ಧೆಯಲ್ಲಿ ಶನಿವಾರ ಎಚ್3ಎನ್2 ಇನ್‌ಫ್ಲುಯೆಂಜಾ ವೈರಸ್ ದೃಢಪಟ್ಟಿದೆ. ಅವರನ್ನು ಗುರುವಾರ ಟಾಟಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸೋಂಕು ತಗುಲಿದ ರೋಗಿಯನ್ನು ಪ್ರತ್ಯೇಕ ವಾಸದಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಸಿವಿಲ್ ಸರ್ಜನ್ ಡಾ. ಜುಝಾರ್ ಮಾಂಝಿ ತಿಳಿಸಿದ್ದಾರೆ.
ರಾಂಚಿಯ ರಾಣಿ ಆಸ್ಪತ್ರೆಯಲ್ಲಿ ನಾಲ್ಕು ವರ್ಷದ ಮಗುವಿಗೆ ಎಚ್3ಎನ್2 ವೈರಸ್ ದೃಢಪಟ್ಟಿದೆ. ನ್ಯುಮೋನಿಯಾ ಲಕ್ಷಣದೊಂದಿಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಡಾ. ರಾಜೇಶ್ ಸಿಂಗ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ಪ್ರಕರಣ ಹೆಚ್ಚಳ...
ಜಾರ್ಖಂಡ್‌ನಲ್ಲಿ ಕೋವಿಡ್ ಸೋಂಕು ಪ್ರಕರಣದಲ್ಲೂ ಹೆಚ್ಚಳ ಕಂಡುಬಂದಿದೆ. ಶನಿವಾರದಂದು ಹೊಸದಾಗಿ ಐದು ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.