ಚೆನ್ನೈ: ಎಐಎಡಿಎಂಕೆ ನಾಯಕಿ ಜಯಲಲಿತಾ ಅವರ ಸಾವಿನ ತನಿಖೆಗೆ ರಚಿಸಿದ್ದ ನ್ಯಾಯಮೂರ್ತಿ ಎ. ಆರ್ಮುಗಸ್ವಾಮಿ ಆಯೋಗವು ಜಯಾ ಅವರ ಆಪ್ತೆ ವಿ.ಕೆ. ಶಶಿಕಲಾ, ಆರೋಗ್ಯ ಸಚಿವ ಸಿ. ವಿಜಯಭಾಸ್ಕರ್ ಹಾಗೂ ಮುಖ್ಯ ಕಾರ್ಯದರ್ಶಿ ಪಿ. ರಾಮ ಮೋಹನ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಲು ಶಿಫಾರಸು ಮಾಡಿದ್ದು, ಈ ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು ಸೋಮವಾರ ತಮಿಳುನಾಡು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.
ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಮತ್ತು ನಂತರದ ಪರಿಸ್ಥಿತಿಗಳ ಕಾರಣ, ಸನ್ನಿವೇಶಗಳ ಕುರಿತು ವಿ.ಕೆ. ಶಶಿಕಲಾ, ವಿಜಯಭಾಸ್ಕರ್ ರಾವ್ ಮತ್ತು ಜಯಲಲಿತಾ ಅವರ ಖಾಸಗಿ ವೈದ್ಯ ಡಾ. ಶಿವಕುಮಾರ್ ಅವರ ವಿರುದ್ಧ ಸರ್ಕಾರದ ಕ್ರಮಕ್ಕಾಗಿ ಪ್ರಕರಣದ ತನಿಖೆ ನಡೆಸಬೇಕು ಎಂದು ಅರುಮುಘಸ್ವಾಮಿ ಆಯೋಗವು ಶಿಫಾರಸು ಮಾಡಿದೆ ಎಂದು ಸರ್ಕಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.