ಲಖನೌ: ‘ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ಮುಖ್ಯಸ್ಥ ಜಯಂತ ಚೌಧರಿ ಅವರು ‘ಇಂಡಿಯಾ’ ಮೈತ್ರಿಕೂಟದೊಂದಿಗೆ ಇರುತ್ತಾರೆ. ಈ ವಿಚಾರವಾಗಿ ಬಿಜೆಪಿ ಗೊಂದಲ ಸೃಷ್ಟಿಸುವ ಕಾರ್ಯ ಮಾಡುತ್ತಿದೆ’ ಎಂದು ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಶಿವಪಾಲ್ ಸಿಂಗ್ ಯಾದವ್ ಬುಧವಾರ ಹೇಳಿದ್ದಾರೆ.
ಚೌಧರಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಶಿವಪಾಲ್ ಸಿಂಗ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.
‘ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಜಯಂತ ಚೌಧರಿ ದುರ್ಬಲಗೊಳಿಸುವುದಿಲ್ಲ ಎಂಬ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.