ADVERTISEMENT

ಮೋದಿ ಸರ್ಕಾರ ಸೇರಿದ ಕುಮಾರಸ್ವಾಮಿ; ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 2:26 IST
Last Updated 19 ಜೂನ್ 2024, 2:26 IST
<div class="paragraphs"><p>ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಜೆಡಿಎಸ್‌ ಪಕ್ಷದ ಗುರುತು ಹಾಗೂ&nbsp;ಎಚ್‌.ಡಿ. ಕುಮಾರಸ್ವಾಮಿ</p></div>

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಜೆಡಿಎಸ್‌ ಪಕ್ಷದ ಗುರುತು ಹಾಗೂ ಎಚ್‌.ಡಿ. ಕುಮಾರಸ್ವಾಮಿ

   

ತಿರುವನಂತಪುರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದ ಅಧಿಕೃತ ಜಾತ್ಯತೀತ ಜನತಾದಳ (ಜೆಡಿಎಸ್‌) ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್‌ ನಿರ್ಧರಿಸಿದೆ.

ಆದಾಗ್ಯೂ, ಸಚಿವ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ಅನರ್ಹಗೊಳ್ಳುವ ಭೀತಿಯಿಂದ ಹೊಸ ಪಕ್ಷದ ಸದಸ್ಯತ್ವ ಪಡೆಯದಿರಲು ತೀರ್ಮಾನಿಸಿದ್ದಾರೆ.

ADVERTISEMENT

ಜೆಡಿಎಸ್‌ ನಾಯಕರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಲು ನಿರ್ಧರಿಸಿದಾಗಿನಿಂದ, ಕೇರಳ ಘಟಕದಲ್ಲಿ ಅಸಮಾಧಾನ ಮೂಡಿತ್ತು. ಸಿಪಿಎಂ ನೇತೃತ್ವದ 'ಎಲ್‌ಡಿಎಫ್‌' ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕೇರಳ ಜೆಡಿಎಸ್‌ಗೆ, ರಾಜ್ಯದಲ್ಲಿ ಮೈತ್ರಿ ಉಳಿಸಿಕೊಳ್ಳುವ ಒತ್ತಡ ಎದುರಾಗಿತ್ತು. ಮೈತ್ರಿಕೂಟದ ಮಿತ್ರ ಪಕ್ಷಷಗಳು ಜೆಡಿಎಸ್‌ ನಡೆಯನ್ನು ಟೀಕಿಸಲಾರಂಭಿಸಿದ್ದವು. ಪಕ್ಷದ ನಾಯಕರೂ ಆಗಿರುವ ಕರ್ನಾಟಕದ ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವ ಸಂಪುಟಕ್ಕೆ ಸೇರಿದ ಬಳಿಕ ಅದು ಇನ್ನಷ್ಟು ಹೆಚ್ಚಾಗಿತ್ತು.

ಹೀಗಾಗಿ ಮಂಗಳವಾರ ಸಭೆ ನಡೆಸಿದ ಕೇರಳ ಜೆಡಿಎಸ್‌ ನಾಯಕರು, ಹೊಸ ಪಕ್ಷ ರಚಿಸಲು ತೀರ್ಮಾನಿಸಿದ್ದಾರೆ. ಅನರ್ಹತೆಯ ಭೀತಿಯಿಂದಾಗಿ, ಪಕ್ಷದ ಇಬ್ಬರು ಶಾಸಕರು ಹೊಸ ಪಕ್ಷದಲ್ಲಿ ಅಧಿಕೃತವಾಗಿ ಯಾವುದೇ ಸ್ಥಾನ ಪಡೆಯದಿರಲು ನಿರ್ಧರಿಸಿದ್ದಾರೆ. ಸದ್ಯಕ್ಕೆ ಅವರು ಅಧಿಕೃತ ಪಕ್ಷದಲ್ಲೇ ಉಳಿಯಲಿದ್ದಾರೆ.

‌ಇಂಧನ ಸಚಿವ ಕೆ.ಕೃಷ್ಣನ್‌ ಕುಟ್ಟಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಸಚಿವ ಮ್ಯಾಥ್ಯೂ ಟಿ.ಥಾಮಸ್‌ ಅವರು ಕೇರಳ ವಿಧಾನಸಭೆಗೆ ಜೆಡಿಎಸ್‌ನಿಂದ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.