ಕೋಲ್ಕತ್ತ: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತದಲ್ಲಿ ಇಂದು (ಶುಕ್ರವಾರ) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಸಂಜೆ 4.50ಕ್ಕೆ ತೆರಳಿದರು.
ಕರ್ನಾಟಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಮತಾ ಬ್ಯಾನರ್ಜಿ ಅವರೊಂದಿಗೆ, ಪ್ರಸ್ತುತ ರಾಜಕೀಯ ಸ್ಥಿತಿಗತಿ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ಹೇಗೆ ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮೂಲಗಳು ತಿಳಿಸಿವೆ.
'ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಗೌರವಾನ್ವಿತ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಇಂದು ಕೋಲ್ಕತ್ತದಲ್ಲಿ ಭೇಟಿಯಾದರು' ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಟಿಎಂಸಿ ಮೂಲಗಳ ಪ್ರಕಾರ, ಬಿಜೆಪಿಯೇತರ ಮತ್ತು ಕಾಂಗ್ರೆಸ್‌ಯೇತರ ನಾಯಕರೊಂದಿಗಿನ ಸಭೆಯು ವಿರೋಧ ಪಕ್ಷಗಳ ಒಗ್ಗಟ್ಟು ಹಾಗೂ ಪ್ರಾದೇಶಿಕ ಶಕ್ತಿ ವೃದ್ಧಿಸುವ ಪಕ್ಷದ ಪ್ರಯತ್ನದ ಭಾಗವಾಗಿದೆ ಎನ್ನಲಾಗಿದೆ.
ರಾಹುಲ್ ಅನರ್ಹತೆ ರಾಜಕೀಯ ದ್ವೇಷ: ಕುಮಾರಸ್ವಾಮಿ
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು 'ಬಿಜೆಪಿಯ ರಾಜಕೀಯ ದ್ವೇಷ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
'ಮೋದಿ ಉಪನಾಮ' ಕುರಿತಂತೆ 2019ರಲ್ಲಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರು ಎಂದು ಸೂರತ್ ನ್ಯಾಯಾಲಯ ಗುರುವಾರವಷ್ಟೇ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಲೋಕಸಭೆ ಕಾರ್ಯದರ್ಶಿ ಅವರು, ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.
ಇವನ್ನೂ ಓದಿ
* ‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ
* ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಅಧಿಸೂಚನೆ
* ರಾಹುಲ್ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.