ADVERTISEMENT

ರಾಜಸ್ಥಾನ | ಟ್ರಕ್‌ಗೆ ಜೀಪ್ ಡಿಕ್ಕಿ: 8 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 5:53 IST
Last Updated 16 ಸೆಪ್ಟೆಂಬರ್ 2024, 5:53 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಜೈಪುರ: ಜೀಪೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು, ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟು, 18 ಜನ ಗಾಯಗೊಂಡಿದ್ದಾರೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿರೋಹಿ ಎಸ್‌ಪಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ವಿರುದ್ಧ ದಿಕ್ಕಿ‌ನಲ್ಲಿ ಬಂದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಪುರುಷರು, ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪಿಂಡ್ವಾರಾ ಪೊಲೀಸ್ ಠಾಣೆ ಎಸ್‌ಎಚ್‌ಒ ಹಮೀರ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.