ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿಕಪ್ರೆನ್ ಎಂಬಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸ್ ಇಲಾಖೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
‘ಭಯೋತ್ಪಾದಕ ಸಂಘಟನೆ ಜೆಇಎಮ್ನ ಒಬ್ಬ ಉಗ್ರನನ್ನು ಹೊಡೆದುರಳಿಸಲಾಗಿದೆ. ಉಗ್ರನನ್ನು ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಕಮ್ರಾನ್ ಭಾಯಿ ಹನೀಸ್ ಎಂದು ಗುರುತಿಸಲಾಗಿದೆ. ಇನ್ನೂ ಶೋಧ ನಡೆಯುತ್ತಿದೆ’ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.