ADVERTISEMENT

ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಪಿಟಿಐ
Published 15 ಜುಲೈ 2024, 9:15 IST
Last Updated 15 ಜುಲೈ 2024, 9:15 IST
<div class="paragraphs"><p>ಪ್ರಧಾನಿ&nbsp;ಅವರನ್ನು ಭೇಟಿ ಮಾಡಿದ&nbsp;ಹೇಮಂತ್ ಸೊರೇನ್</p></div>

ಪ್ರಧಾನಿ ಅವರನ್ನು ಭೇಟಿ ಮಾಡಿದ ಹೇಮಂತ್ ಸೊರೇನ್

   

(ಚಿತ್ರ ಕೃಪೆ–@HemantSorenJMM)

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ADVERTISEMENT

ಪ್ರಧಾನ ಮಂತ್ರಿಯೊಂದಿಗಿನ ಅವರ ಭೇಟಿಯ ಚಿತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸೊರೇನ್, 'ಇದೊಂದು ಸೌಜನ್ಯದ ಭೇಟಿ' ಎಂದು ಬರೆದುಕೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಸೊರೇನ್ ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. 5 ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4ರಂದು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.