ADVERTISEMENT

Jharkhand Election: ರಾಹುಲ್ ಗಾಂಧಿ ಭೇಟಿಯಾದ ಹೇಮಂತ್ ಸೊರೇನ್, ಚರ್ಚೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 12:18 IST
Last Updated 19 ಅಕ್ಟೋಬರ್ 2024, 12:18 IST
<div class="paragraphs"><p>ರಾಹುಲ್ ಗಾಂಧಿ, ಹೇಮಂತ್ ಸೊರೇನ್</p></div>

ರಾಹುಲ್ ಗಾಂಧಿ, ಹೇಮಂತ್ ಸೊರೇನ್

   

(ಚಿತ್ರ ಕೃಪೆ: ಕಾಂಗ್ರೆಸ್)

ರಾಂಚಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ರಾಂಚಿಯಲ್ಲಿ ಇಂದು (ಶನಿವಾರ) ಭೇಟಿಯಾಗಿರುವ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾತುಕತೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಎಐಸಿಸಿ ಮಾಹಿತಿ ನೀಡಿದೆ.

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಯ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 81 ಸ್ಥಾನಗಳ ಪೈಕಿ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿ 70ರಲ್ಲಿ ಸ್ಪರ್ಧಿಸಲಿದೆ ಎಂದು ಹೇಮಂತ್ ಸೊರೇನ್ ಮಾಹಿತಿ ನೀಡಿದ್ದರು.

ಆರ್‌ಜೆಡಿ, ಎಡಪಕ್ಷ ಸೇರಿದ 'ಇಂಡಿಯಾ' ಮೈತ್ರಿಕೂಟವು ಉಳಿದ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 13ರಂದು ಮೊದಲ ಹಂತ ಹಾಗೂ ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಬಳಿಕ ನವೆಂಬರ್ 23ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.