ADVERTISEMENT

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಪಿಟಿಐ
Published 13 ಜುಲೈ 2024, 9:11 IST
Last Updated 13 ಜುಲೈ 2024, 9:11 IST
<div class="paragraphs"><p>ಹೇಮಂತ್ ಸೊರೇನ್, ಸೋನಿಯಾ ಗಾಂಧಿ, ಕಲ್ಪನಾ</p></div>

ಹೇಮಂತ್ ಸೊರೇನ್, ಸೋನಿಯಾ ಗಾಂಧಿ, ಕಲ್ಪನಾ

   

(ಪಿಟಿಐ)

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ADVERTISEMENT

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳ ನಂತರ ಸೊರೇನ್ ಅವರು ನವದೆಹಲಿಯ ಸೋನಿಯಾ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಸೊರೇನ್ ಅವರ ಪತ್ನಿ ಕಲ್ಪನಾ ಜೊತೆಗಿದ್ದರು.

'ಇದೊಂದು ಸೌಜನ್ಯದ ಭೇಟಿ ಎಂದು ಸೊರೇನ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಜೈಲಿನಿಂದ ಹೊರಬಂದ ಬಳಿಕ ಸೋನಿಯಾ ಅವರನ್ನು ಭೇಟಿಯಾಗಲು ಬಂದಿದ್ದೇನೆ' ಎಂದು ಹೇಳಿದ್ದಾರೆ.

'ಜಾರ್ಖಂಡ್ ಚುನಾವಣೆಯ ಚರ್ಚೆಗಳು ಮುಂದುವರಿಯಲಿವೆ. ಚುನಾವಣೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ' ಎಂದು ಅವರು ತಿಳಿಸಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೂಡ ಶೀಘ್ರದಲ್ಲೇ ಹೊರಬರಲಿದ್ದಾರೆ' ಎಂದು ಸೊರೇನ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4ರಂದು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಜಾರ್ಖಂಡ್‌ನಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹಾಗೂ ಕಾಂಗ್ರೆಸ್ ಮೈತ್ರಿಯಾಗಿ ಚುನಾವಣೆ ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.