ADVERTISEMENT

ಸೊರೇನ್ ಜಾಮೀನು ಅರ್ಜಿ: ಇ.ಡಿ ಉತ್ತರ ಕೇಳಿದ ಹೈಕೋರ್ಟ್

ಪಿಟಿಐ
Published 28 ಮೇ 2024, 5:02 IST
Last Updated 28 ಮೇ 2024, 5:02 IST
ಹೇಮಂತ್ ಸೊರೇನ್
ಹೇಮಂತ್ ಸೊರೇನ್   

ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಜಾರ್ಖಂಡ್ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. 

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿರುವ ಸೊರೇನ್, ಸೋಮವಾರ ಜಾಮೀನು ಅರ್ಜಿ ಸಲ್ಲಿಸಿದ್ದು, ತ್ವರಿತ ವಿಚಾರಣೆಗೆ ಕೋರಿದ್ದಾರೆ. 

‘ಜೆಎಂಎಂ ಪಕ್ಷದ ಮುಖಂಡ ಸೊರೇನ್ ಅವರು ರಾಜಕೀಯ ಪಿತೂರಿಯ ಸಂತ್ರಸ್ತರಾಗಿದ್ದಾರೆ’ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ತಿಳಿಸಿದರು. 

ADVERTISEMENT

ಈ ವೇಳೆ ತನ್ನ ಅಭಿಪ್ರಾಯ ತಿಳಿಸುವಂತೆ ಇ.ಡಿಗೆ ಸೂಚಿಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಜೂನ್ 10ರಂದು ನಿಗದಿಪಡಿಸಿದೆ. 

ಜೈನ್ ಜಾಮೀನು ಅರ್ಜಿ: ಇ.ಡಿಗೆ ನೋಟಿಸ್

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಸಲ್ಲಿಸಿರುವ ‘ಡೀಫಾಲ್ಟ್ ಜಾಮೀನು’ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ಸೂಚಿಸಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಈ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿ ನೋಟಿಸ್ ಜಾರಿಗೊಳಿಸಿದರು. ಈ ಕುರಿತ ಮುಂದಿನ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು.  2017ರಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧಾರದ ಮೇರೆಗೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು 2022ರ ಮೇ 30ರಂದು ಬಂಧಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.