ರಾಂಚಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.
ನ್ಯಾಯಮೂರ್ತಿ ಅಂಬುಜಾನಾಥ್ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ನಡೆಸಿತು. ರಾಹುಲ್ ಗಾಂಧಿ ಪರ ವಕೀಲರಾದ ಪಿಯೂಷ್ ಚಿತ್ರೇಶ್ ಮತ್ತು ದೀಪಂಕರ್ ರಾಯ್ ಅವರು ವಾದ ಮಂಡಿಸಿದ್ದಾರೆ.
ಪ್ರಕರಣ ಸಂಬಂಧ ಫೆಬ್ರುವರಿ 16ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು.
2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭ ರಾಜಸ್ಥಾನದಲ್ಲಿ ರಾಹುಲ್ ಅವರು ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದರು. ಈ ಹೇಳಿಕೆ ಸಂಬಂಧ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಹುಲ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.