ರಾಂಚಿ: ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಠಾಕೂರ್‌ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್‌ಎಫ್‌ಐ)ದ ಪ್ರಾದೇಶಿಕ ಕಮಾಂಡರ್ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತ ಮಾವೋವಾದಿಯನ್ನು ವಿಶಾಲ್ ಶರ್ಮಾ ಅಲಿಯಾಸ್ ವಿಶಾಲ್ ಸಾಹು ಎಂದು ಗುರುತಿಸಿದ್ದು, ಆತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದೂ ವಿವರಿಸಿದ್ದಾರೆ
ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.