ರಾಂಚಿ: ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಚಂಪೈ ಸೊರೇನ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಮೈತ್ರಿ ಸರ್ಕಾರದ ಶಾಸಕರು ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ.
ಆಪರೇಷನ್ ಕಮಲದ ಭೀತಿ ಇರುವುದರಿಂದ ಆಡಳಿತಾರೂಢ ಜೆಎಂಎಂ ಹಾಗೂ ಮಿತ್ರ ಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರ್ಕಾರವಿರುವ ತೆಲಂಗಾಣಕ್ಕೆ ತೆರಳಲು ನಿರ್ಧರಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ತಿಳಿಸಿದ್ದಾರೆ.
‘ಬಹುಮತ ಸಾಬೀತಿಗೆ 10 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ವಿಶ್ವಾಸ ಮತಯಾಚನೆ ಫೆ. 5ರಂದೇ ನಡೆಯಲಿದೆ. ಇಂಥ ಸಂದರ್ಭದಲ್ಲಿ ಯಾವುದೇ ಅವಕಾಶವನ್ನು ವಿರೋಧಿಗಳಿಗೆ ನೀಡಲು ಸಿದ್ಧರಿಲ್ಲ. ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುವ ಎಲ್ಲಾ ಸಾಧ್ಯತೆಗಳೂ ಇವೆ’ ಎಂದು ಮುಖಂಡರೊಬ್ಬರು ಪಿಟಿಐಗೆ ಹೇಳಿದ್ದಾರೆ.
81 ಶಾಸಕರ ಜಾರ್ಖಂಡ್ ವಿಧಾನಸಭೆಯಲ್ಲಿ 43 ಸ್ಥಾನ ಶಾಸಕರ ಬೆಂಬಲ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವಾದ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.