ADVERTISEMENT

Jharkhand Elections | 36 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

ಪಿಟಿಐ
Published 23 ಅಕ್ಟೋಬರ್ 2024, 14:13 IST
Last Updated 23 ಅಕ್ಟೋಬರ್ 2024, 14:13 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಂಚಿ: ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬುಧವಾರ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 35 ಮಂದಿಗೆ ಮತ್ತು ಎರಡನೇ ಪಟ್ಟಿಯಲ್ಲಿ ಒಬ್ಬರಿಗೆ ಟಿಕೆಟ್‌ ನೀಡಲಾಗಿದೆ.

ADVERTISEMENT

ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಬರ್ಹೈತ್‌ನಿಂದ ಮತ್ತು ಅವರ ಪತ್ನಿ ಕಲ್ಪನಾ ಸೊರೇನ್‌ ಅವರು ಗಂಡೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹೇಮಂತ್‌ ಅವರ ಸಹೋದರ ಬಸಂತ್‌ ಸೊರೇನ್ ಅವರು ದುಮ್ಕಾದಿಂದ ಸ್ಪರ್ಧಿಸಲಿದ್ದಾರೆ.

ರಾಜ್ಯಸಭಾ ಸದಸ್ಯೆ ಮಹುವಾ ಮಾಜಿ ಅವರನ್ನು ರಾಂಚಿಯಿಂದ ಕಣಕ್ಕಿಳಿಸಲಾಗಿದೆ. ಅವರು  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಮತ್ತು ಜೆಎಂಎಂ ಮಹಿಳಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2014 ಮತ್ತು 2019ರಲ್ಲಿ ರಾಂಚಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತದಾನ ಎರಡು ಹಂತಗಳಲ್ಲಿ ನವೆಂಬರ್ 13 ಮತ್ತು 20ರಂದು ನಡೆಯಲಿದೆ. ನವೆಂಬರ್‌ 23ರಂದು ಮತಎಣಿಕೆ ನಡೆಯಲಿದೆ.

Cut-off box - ಜೆಎಂಎಂನಿಂದ ಕುಟುಂಬ ರಾಜಕಾರಣ: ಹಿಮಂತ್‌ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವ ಶರ್ಮ ಅವರು ಕುಟುಂಬ ರಾಜಕಾರಣ ವಿಚಾರವಾಗಿ ಜೆಎಂಎಂ ಪಕ್ಷವನ್ನು ಟೀಕಿಸಿದರು.  ಜಾರ್ಖಂಡ್‌ನಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಯೂ ಆಗಿರುವ ಅವರು ‘ಜೆಎಂಎಂ ಅಭ್ಯರ್ಥಿಗಳ ಪಟ್ಟಿಯು ಕುಟುಂಬ ರಾಜಕಾರಣವನ್ನು ಸ್ಪಷ್ಟವಾಗಿ ಸಂಕೇತಿಸುತ್ತಿದೆ. ಬೇರೆ ಬೇರೆ ವಲಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಲ್ಲಿ ಪಕ್ಷವು ವಿಫಲವಾಗಿದೆ’ ಎಂದರು. ‘ಪಕ್ಷಕ್ಕೆ ಮತ್ತಷ್ಟು ಅಭ್ಯರ್ಥಿಗಳ ಅಗತ್ಯವಿದ್ದರೆ ಬಿಜೆಪಿಯು ನೀಡಲಿದೆ’ ಎಂದು ಲೇವಡಿ ಮಾಡಿದರು. ಬಿಜೆಪಿ ತೊರೆದು ಜೆಎಂಎಂ ಸೇರ್ಪಡೆಯಾದ ನಾಯಕರನ್ನು ಪರೋಕ್ಷವಾಗಿ ಉಲ್ಲೇಖಿಸಿ ಈ ಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.