ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತನ್ನ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಕೇವಲ ಒಂದು ಸ್ಥಾನಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಿಸಲಾಗಿದೆ.
ಜಾಮಾ ಕ್ಷೇತ್ರದಿಂದ ಬಿಜೆಪಿ ಮಾಜಿ ಶಾಸಕಿ ಲೂಯಿಸ್ ಮರಾಂಡಿ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಈ ಕ್ಷೇತ್ರ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಾಗಿದೆ. ಇತ್ತೀಚೆಗೆ ಬಿಜೆಪಿ ತೊರೆದಿದ್ದ ಅವರು(ಲೂಯಿಸ್ ಮರಾಂಡಿ) ಅಕ್ಟೋಬರ್ 21 ರಂದು ಜೆಎಂಎಂಗೆ ಸೇರಿದ್ದರು.
81 ಸ್ಥಾನಗಳ ವಿಧಾನಸಭಾ ಸ್ಥಾನಗಳ ಪೈಕಿ ಜೆಎಂಎಂ ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
2014ರ ವಿಧಾನಸಭಾ ಚುನಾವಣೆಯಲ್ಲಿ ದುಮ್ಕಾ ಕ್ಷೇತ್ರದಿಂದ ಸ್ಫರ್ಧಿಸಿದ್ದ ಲೂಯಿಸ್ ಮರಾಂಡಿ ಅವರು ಜೆಎಂಎಂ ಅಭ್ಯರ್ಥಿ ಹೇಮಂತ್ ಸೊರೇನ್ ಅವರನ್ನು 5,262 ಮತಗಳ ಅಂತರದಿಂದ ಸೋಲಿಸಿದ್ದರು.
ರಾಜ್ಯದಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.