ಅಹಮದಾಬಾದ್: ಕಾನೂನುಬಾಹಿರವಾಗಿ ಗುಂಪು ಸೇರಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರ ಆರು ಮಂದಿ ಹೋರಾಟಗಾರರನ್ನು ಇಲ್ಲಿಯ ಮೆಟ್ರೊಪಾಲಿಟನ್ ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ.
ನೈರ್ಮಲ್ಯ ಕಾರ್ಯಕರ್ತರ ಹಕ್ಕುಗಳನ್ನು ಆಗ್ರಹಿಸಿ 2016ರಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೇವಾನಿ ಅವರೂ ಅದರಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಗೆ ಪೂರ್ವಾನುಮತಿ ಪಡೆದಿರಲಿಲ್ಲ ಮತ್ತು ಪ್ರತಿಭಟನೆ ವೇಳೆ ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಲಾಗಿತ್ತು ಎಂಬ ಆರೋಪದ ಮೇರೆಗೆ ಪ್ರತಿಭಟನಕಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಆರೋಪ ಸಾಬೀತುಪಡಿಸಲು ಸರ್ಕಾರ ಪರ ವಕೀಲರಿಗೆ ಸಾಧ್ಯವಾಗಿಲ್ಲ ಎಂದು ಹೇಳಿರುವ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.