ADVERTISEMENT

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2023, 15:01 IST
Last Updated 16 ಡಿಸೆಂಬರ್ 2023, 15:01 IST
<div class="paragraphs"><p>ಜಿತು ಪಟ್ವಾರಿ</p></div>

ಜಿತು ಪಟ್ವಾರಿ

   

ಭೋಪಾಲ್: ಮಧ್ಯಪ್ರದೇಶ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಜಿತು ಪಟ್ವಾರಿ ಅವರನ್ನು ನೇಮಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.

ಈ ಮೊದಲು ಮಾಜಿ ಮುಖ್ಯಮಂತ್ರಿ ಕಮಲನಾಥ ಅವರು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 

ADVERTISEMENT

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಟ್ವಾರಿ ಅವರು ಬಿಜೆಪಿ ಅಭ್ಯರ್ಥಿ ಸಾಹು ವಿರುದ್ಧ 35 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಬದಲಾವಣೆ ಮಾಡಿದೆ.

ಇದರ ಬೆನ್ನಲ್ಲೇ ಮಧ್ಯಪ್ರದೇಶ ವಿಧಾನಸಭೆಯ ಸಿಎಲ್‌ಪಿ ನಾಯಕರನ್ನಾಗಿ ಉಮಂಗ್‌ ಸಿಂಘರ್ ಅವರನ್ನು ಹಾಗೂ ಉಪ ನಾಯಕರನ್ನಾಗಿ ಹೇಮಂತ್ ಕಾಟರೆ ಅವರನ್ನು ಕಾಂಗ್ರೆಸ್ ನೇಮಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.