ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು (ಮಂಗಳವಾರ) ನಡೆಯುತ್ತಿದ್ದು, ಪಕ್ಷದ ಗೆಲುವಿಗಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರವೀಂದರ್ ರೈನಾ ಅವರು ಯಜ್ಞ ನಡೆಸಿದ್ದಾರೆ.
ಚುನಾವಣೆಯಲ್ಲಿ ಪಕ್ಷವು ಬಹುಮತ ಪಡೆದು ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯು ತನ್ನ ಮೈತ್ರಿ ಪಾಲುದಾರರು ಮತ್ತು ಸ್ವತಂತ್ರ ಅಭ್ಯರ್ಥಿಗಳೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಬಿಜೆಪಿ 30–35 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಹೆಚ್ಚುವರಿ 15 ಪಕ್ಷೇತರರು ಮತ್ತು ಸಮಾನ ಮನಸ್ಕರ ಜೊತೆ ಸೇರಿ ಸರ್ಕಾರ ರಚಿಸುತ್ತೇವೆ’ ಎಂದು ರವೀಂದರ್ ರೈನಾ ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಯಜ್ಞ ನಡೆಸಲಾಗಿದೆ. ನಾವೆಲ್ಲರೂ ಒಟ್ಟಾಗಿ 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಹುಮತ ಪಡೆದು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ರೈನಾ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.