ಛತ್ರ (ಜಾರ್ಖಂಡ್): ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯೊಂದಿಗೆ ಆಟವಾಡಿದ ಅತ್ಯಂತ ಭ್ರಷ್ಟ ಸಿಎಂ ಆಗಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಆರೋಪಿಸಿದ್ದಾರೆ.
ಜಾರ್ಖಂಡ್‌ನ ಇತ್ಖೋರಿಯಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಹೇಮಂತ್ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಮಯ ಬಂದಿದೆ’ ಎಂದು ಹೇಳಿದರು.
‘ಹೇಮಂತ್ ಸೊರೇನ್ ಅತ್ಯಂತ ಭ್ರಷ್ಟ ಸಿಎಂ. ಅವರು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯೊಂದಿಗೆ ಆಟವಾಡಿದ್ದಾರೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಯಾವುದೇ ಕಳಂಕಿತ ವ್ಯಕ್ತಿಗಳನ್ನು ದೇಶ ಎಂದಿಗೂ ಒಪ್ಪಿಕೊಳ್ಳುವುದಿಲ್ಲ’ ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಅಮೆರಿಕ ಪ್ರವಾಸದ ವೇಳೆ ದೇಶವು ಸಿಖ್ ಸಮುದಾಯದವರಿಗೆ ಸುರಕ್ಷಿತವಲ್ಲ ಎಂಬ ಹೇಳಿಕೆ ಮೂಲಕ ಅವರನ್ನು ಪ್ರಚೋದಿಸುವ ಪ್ರಯತ್ನ ಮಾಡಲಾಗಿದೆ. ಅಲ್ಲದೆ, ಹೊರ ದೇಶಗಳಲ್ಲಿ ಭಾರತದ ಘನತೆ ಮತ್ತು ಗೌರವಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಅವರು ಕಿಡಿಕಾರಿದ್ದಾರೆ.
ವರ್ಷಾಂತ್ಯದಲ್ಲಿ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.