ADVERTISEMENT

Jarkhand Polls | ಬಡ ಕುಟುಂಬಕ್ಕೆ ವಾರ್ಷಿಕ ₹1.21 ಲಕ್ಷ ಆರ್ಥಿಕ ನೆರವು: AJSU

ಪಿಟಿಐ
Published 8 ನವೆಂಬರ್ 2024, 9:52 IST
Last Updated 8 ನವೆಂಬರ್ 2024, 9:52 IST
<div class="paragraphs"><p>ಎಜೆಎಸ್‌ಯು ಪ್ರಣಾಳಿಕೆ</p></div>

ಎಜೆಎಸ್‌ಯು ಪ್ರಣಾಳಿಕೆ

   

ರಾಂಚಿ: ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಿತ್ರ ಪಕ್ಷವಾದ ಎಜೆಎಸ್‌ಯು ಪಕ್ಷವು ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ರಾಜ್ಯದ ಪ್ರತಿಯೊಂದು ಬಡ ಕುಟುಂಬಕ್ಕೆ ವಾರ್ಷಿಕವಾಗಿ ₹1.21 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿದೆ.

ಎಜೆಎಸ್‌ಯು ಪಕ್ಷದ ಮುಖ್ಯಸ್ಥ ಸುದೇಶ್ ಮಹ್ತೊ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ADVERTISEMENT

ಪ್ರತಿ ಬಡ ಕುಟುಂಬಕ್ಕೆ ವಾರ್ಷಿಕ ₹1.21 ಲಕ್ಷ ಆರ್ಥಿಕ ನೆರವು, ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ, ಮಹಿಳೆಯರ ಸುರಕ್ಷತೆಗೆ ಒಂದು ಆಯೋಗ, ಕೆಲಸ ಮಾಡುವ ಮಹಿಳೆಯರಿಗೆ ವಸತಿ ನಿಲಯಗಳ ಸ್ಥಾಪನೆ, ಪ್ರತಿಯೊಬ್ಬರಿಗೆ ₹25 ಲಕ್ಷದ ಆರೋಗ್ಯ ವಿಮಾ ಯೋಜನೆಯನ್ನು ಅನುಷ್ಠಾನ ಮಾಡುವುದಾಗಿ ಅವರು ತಿಳಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಡಿಯಲ್ಲಿ ಎಜೆಎಸ್‌ಯು 10, ಜೆಡಿ(ಯು) 2, ಎಲ್‌ಜೆಪಿ (ರಾಮ್ ವಿಲಾಸ್) 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ. ಉಳಿದ 68 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ನವೆಂಬರ್ 13 ಮತ್ತು 20ರಂದು ಮತದಾನ ನಡೆಯಲಿವೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.