ನವದೆಹಲಿ: ‘ಜಮಾತ್–ಉಲ್– ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ)’ ಸಂಘಟನೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ನಿಷೇಧಿಸಿದೆ.
ಗಯಾ ಮತ್ತು ಬುರ್ದ್ವಾನ್ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಈ ಸಂಘಟನೆ ಭಾಗಿಯಾಗಿತ್ತು ಎಂದು ಆರೋಪಿಸಲಾಗಿತ್ತು.
ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ. ಜೆಎಂಬಿ ಭಯೋತ್ಪಾದನೆ ಚಟುವಟಿಕೆ ಕೈಗೊಳ್ಳಲು ಪ್ರಚೋದನೆ ನೀಡಿದೆ ಮತ್ತು ಯುವಕರನ್ನು ಉಗ್ರಗಾಮಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಉತ್ತೇಜನ ನೀಡಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಢಾಕಾದಲ್ಲಿ 2016ರಲ್ಲಿ ನಡೆದ ಸ್ಫೋಟದಲ್ಲಿ ಈ ಸಂಘಟನೆಯ ಕೈವಾಡವಿತ್ತು ಎಂದು ಆರೋಪಿಸಲಾಗಿತ್ತು. ಈ ಸ್ಫೋಟದಲ್ಲಿ 22 ಮಂದಿ ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.