ADVERTISEMENT

ಜೆಎಂಎಂ ನೇತೃತ್ವದ ಮೈತ್ರಿಕೂಟ 81 ಸ್ಥಾನಗಳಲ್ಲಿಯೂ ಸ್ಪರ್ಧಿಸಲಿದೆ: ಜಾರ್ಖಂಡ್ ಸಿಎಂ

ಪಿಟಿಐ
Published 15 ಅಕ್ಟೋಬರ್ 2024, 2:37 IST
Last Updated 15 ಅಕ್ಟೋಬರ್ 2024, 2:37 IST
<div class="paragraphs"><p>ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್</p></div>

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್

   

ರಾಂಚಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟ ಎಲ್ಲಾ 81 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.

ಸೋಮವಾರ ನಡೆದ ಜೆಎಂಎಂ ಕೇಂದ್ರ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ತಮ್ಮ ಪಕ್ಷ ಮತ್ತೆ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

'ನಾನು ಎಲ್ಲಾ ಕಾರ್ಯಕರ್ತರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರೊಂದಿಗೆ ಜೆಎಂಎಂ ಕೇಂದ್ರ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದೆ. ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ' ಎಂದು ಸೊರೇನ್ ಹೇಳಿದ್ದಾರೆ.

2025ರ ಜನವರಿ 5ಕ್ಕೆ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿ ಮುಕ್ತಾಯವಾಗಲಿದೆ. ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.