ADVERTISEMENT

ಜೆಎಂಎಂ ಪ್ರಣಾಳಿಕೆ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ

ಪಿಟಿಐ
Published 11 ನವೆಂಬರ್ 2024, 16:17 IST
Last Updated 11 ನವೆಂಬರ್ 2024, 16:17 IST
.
.   

ರಾಂಚಿ: ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ವಿಧಾನಸಭೆ ಚುನಾವಣೆಗೆ ಸೋಮವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು.

ಪಕ್ಷದ ಮುಖ್ಯಸ್ಥ ಶಿಬು ಸೊರೇನ್‌ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಕೃಷಿ, ಶಿಕ್ಷಣ, ಸ್ಥಳೀಯ ನಿವಾಸಿಗಳ ಹಕ್ಕುಗಳು ಸೇರಿದಂತೆ ಒಂಬತ್ತು ಪ್ರಮುಖ ವಿಚಾರಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

ಪಕ್ಷದ ವಕ್ತಾರ ಸುಪ್ರಿಯೊ ಭಟ್ಟಾಚಾರ್ಯ ಅವರು, ‘ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಎಲ್ಲಾ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಲಾಗುವುದು’ ಎಂದು ಹೇಳಿದರು.

ADVERTISEMENT

ಇತರ ಭರವಸೆಗಳು

*ಕ್ರೆಡಿಟ್ ಗ್ಯಾರಂಟಿ ಯೋಜನೆ ಅಡಿಯಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮಿಗಳಿಗೆ ₹5 ಕೋಟಿವರೆಗೆ ಸಾಲ ಸೌಲಭ್ಯ

*ಸಣ್ಣ ಮತ್ತು ಮಧ್ಯಮ ವರ್ತಕರ ಸಾಲ ಮನ್ನಾ

*ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.