ನವದೆಹಲಿ: ‘ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬುತ್ತದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.
ಸಂಸತ್ತಿನ ‘ಸಂವಿಧಾನ ಸದನ’ದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ. 1949ರ ನವೆಂಬರ್ 26ರಂದು ಅಂದಿನ ಸಂಸತ್ತು ಇದೇ ಸಭಾಂಗಣದಲ್ಲಿಯೇ ಸಂವಿಧಾನವನ್ನು ಅಂಗೀಕರಿಸಿತ್ತು.
ನ.26 ಅನ್ನು ಪ್ರತಿ ವರ್ಷವೂ ಕಾನೂನು ದಿನವನ್ನಾಗಿ ಆಚರಿಸಲಾಗುತ್ತಿತ್ತು. ಆದರೆ, ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿ (2015) ಸಂದರ್ಭದಿಂದ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.