ನವದೆಹಲಿ: ಉಗ್ರರಿಗೆ ಹಣ ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್, ಸದ್ಯ ಸಂಸದ ಆಗಿರುವ ಕಾರಣ ಅವರ ವಿರುದ್ಧದ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲು ದೆಹಲಿ ನ್ಯಾಯಾಲಯವು ಶಿಫಾರಸು ಮಾಡಿದೆ.
ಜಾಮೀನು ಕೋರಿ ರಶೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಛಂದರ್ ಜೀತ್ ಸಿಂಗ್ ಅವರು ಜಿಲ್ಲಾ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ವರ್ಗಾಯಿಸಿದರು. ನ.25ರಂದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಇದಲ್ಲದೇ, ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಎನ್‌ಐಎ ದಾಖಲಿಸಿರುವ ಪ್ರಕರಣ ಸಂಬಂಧ ರಶೀದ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಎಂಜಿನಿಯರ್ ರಶೀದ್ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿದ ಆರೋಪದಡಿ 2019ರಿಂದ ತಿಹಾರ್ ಜೈಲಿನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.