ರಾಂಚಿ: ನಗರದ ರಿಮ್ಸ್ (ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ) ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಕಿರಿಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸ್ಟೆಲ್ ಸಂಖ್ಯೆ 4ರ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ವೈದ್ಯ ಸ್ಥಳದಲ್ಲೇ ಮೃತಪಟ್ಟಿದ್ದರೆ, ಜತೆಯಲ್ಲಿದ್ದ ಕಿರಿಯ ವೈದ್ಯೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಮೃತಪಟ್ಟಿರುವ ಕಿರಿಯ ವೈದ್ಯ ರಿಮ್ಸ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ ಎಂದು ಮಾಧ್ಯಮ ವರದಿಗಳು ಸೂಚಿಸಿವೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಇರಬಹುದು ಎನಿಸುತ್ತಿದೆ. ಆದರೆ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.