ADVERTISEMENT

ವೈದ್ಯೆಯ ಹತ್ಯೆ ಪ್ರಕರಣ: ಕೋಲ್ಕತ್ತದಲ್ಲಿ ವೈದ್ಯರ ಆಮರಣಾಂತ ಉಪವಾಸ ಸತ್ಯಾಗ್ರಹ

ಪಿಟಿಐ
Published 6 ಅಕ್ಟೋಬರ್ 2024, 16:09 IST
Last Updated 6 ಅಕ್ಟೋಬರ್ 2024, 16:09 IST
<div class="paragraphs"><p>ಆಮರಣಾಂತ ಉಪವಾಸ ಸತ್ಯಾಗ್ರಹ</p></div>

ಆಮರಣಾಂತ ಉಪವಾಸ ಸತ್ಯಾಗ್ರಹ

   

– ಪಿಟಿಐ ಚಿತ್ರ

ಕೋಲ್ಕತ್ತ: ಆರ್‌.ಜಿ. ಕರ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ವೈದ್ಯೆಯ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಮತ್ತು ಕೆಲಸದ ಸ್ಥಳದಲ್ಲಿ ಸುರಕ್ಷತೆಗೆ ಆಗ್ರಹಿಸಿ ಕಿರಿಯ ವೈದ್ಯರು, ನಗರದ ಧರ್ಮತಲಾ ಪ್ರದೇಶದ ಕೇಂದ್ರ ಭಾಗದಲ್ಲಿ ಭಾನುವಾರವೂ ಆಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರಿಸಿದರು.

ADVERTISEMENT

ಶನಿವಾರ ರಾತ್ರಿ 8.30 ರೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ವೈದ್ಯರು ನೀಡಿದ್ದ 24 ಗಂಟೆಗಳ ಗಡುವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ ನಂತರ ಕಿರಿಯ ವೈದ್ಯಾಧಿಕಾರಿಗಳು ಶನಿವಾರ ರಾತ್ರಿ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು. ಪ್ರತಿಭಟನಾ ಸ್ಥಳದಲ್ಲಿ ಸೇರಿರುವ ಹಲವು ಮಂದಿ ಹಿರಿಯ ವೈದ್ಯರು, ಕಿರಿಯ ವೈದ್ಯರೊಂದಿಗೆ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಯೋಜಿಸಿದ್ದಾರೆ.

ಉಪವಾಸದ ವೇಳೆ ಯಾವುದೇ ವೈದ್ಯರು ಅನಾರೋಗ್ಯಕ್ಕೆ ತುತ್ತಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಕಿರಿಯ ವೈದ್ಯರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.