ನವದೆಹಲಿ: ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿಗೆ ಪದೋನ್ನತಿ ನೀಡಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ.
2006ರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಬೋಪಣ್ಣ, 2018ರ ಅಕ್ಟೋಬರ್‌ನಲ್ಲಿ ಗುವಾಹಟಿ ಹೈಕೋರ್ಟ್‌ಗೆ ಸಿ.ಜೆ. ಆಗಿ ಪದೋನ್ನತಿ ಹೊಂದಿದ್ದರು.
ಬೋಪಣ್ಣ ಅವರು ಪದೋನ್ನತಿ ಹೊಂದಿದಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ನ್ಯಾಯಮೂರ್ತಿಗಳ ಸಂಖ್ಯೆ 3ಕ್ಕೆ ಏರಲಿದೆ. ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ್ ಮತ್ತು ಎಸ್.ಅಬ್ದುಲ್ ನಜೀರ್ ಸೇವೆ ಸಲ್ಲಿಸುತ್ತಿದ್ದಾರೆ.Gauhati High Court
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.