ಗುವಾಹಟಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಜ್ಜಿಕುಟ್ಟೀರ ಸೋಮಯ್ಯ ಬೋಪಣ್ಣ ಅವರು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ ಅವರು ಸೋಮಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದರು.
59 ವರ್ಷದ ಸೋಮಯ್ಯ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಕೆ. ಗೋಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿಕೊಂಡರು.
ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್, ಕಾನೂನು ಸಚಿವ ಸಿದ್ಧಾರ್ಥ ಭಟ್ಟಾಚಾರ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.