ಹೈದರಾಬಾದ್: ವಿದ್ಯುತ್ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ನರಸಿಂಹ ರೆಡ್ಡಿ ಸಮಿತಿಯು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ರೇವಂತ್ ರೆಡ್ಡಿ ನೇತೃತ್ವದ ಸರ್ಕಾರವು ಹಗರಣದ ತನಿಖೆಗಾಗಿ ಸಮಿತಿ ನೇಮಕ ಮಾಡಿತ್ತು. ನೋಟಿಸ್‌ಅನ್ನು ಕೆಲ ದಿನಗಳ ಹಿಂದೆಯೇ ಜಾರಿಮಾಡಿದ್ದರೂ, ಈ ವಿಷಯ ಮಂಗಳವಾರ ಬಹಿರಂಗೊಂಡಿದೆ.
ಒಪ‍್ಪಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಜೂನ್ 15ರ ಒಳಗಾಗಿ ವಿವರವಾದ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ಪ‍್ರತಿಕ್ರಿಯೆ ನೀಡಲು ಜುಲೈ 30ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಕೆಸಿಆರ್ ಅವರು ಸಮಿತಿಗೆ ಮನವಿ ಮಾಡಿದ್ದಾರೆ.
ಕೆಸಿಆರ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಯಾದಾದ್ರಿ ಮತ್ತು ದಮರಚೆರ್ಲಾ ವಿದ್ಯುತ್ ಸ್ಥಾವರ ನಿರ್ಮಾಣ ಒಪ್ಪಂದ ಮತ್ತು ಛತ್ತೀಸ್‌ಗಢದಿಂದ 1,000 ಮೆಗಾವಾಟ್ ವಿದ್ಯುತ್ ಖರೀದಿ ಒಪ್ಪಂದದ ಪ್ರಸ್ತಾಪದಲ್ಲಿ ಅವ್ಯವಹಾರದ ಆರೋಪಗಳು ಕೇಳಿಬಂದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.