ADVERTISEMENT

ದೇಶದ 51ನೇ ಸಿಜೆಐ ಆಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾ.ಸಂಜೀವ್ ಖನ್ನಾ

ಪಿಟಿಐ
Published 10 ನವೆಂಬರ್ 2024, 13:56 IST
Last Updated 10 ನವೆಂಬರ್ 2024, 13:56 IST
<div class="paragraphs"><p>ನ್ಯಾಯಮೂರ್ತಿ ಸಂಜೀವ್ ಖನ್ನಾ</p></div>

ನ್ಯಾಯಮೂರ್ತಿ ಸಂಜೀವ್ ಖನ್ನಾ

   

(ಪಿಟಿಐ ಚಿತ್ರ)

ನವದೆಹಲಿ: ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ಅವರು ಸೋಮವಾರ (ನ.11) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ADVERTISEMENT

ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ನ್ಯಾ.ಖನ್ನಾ ಅವರು ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಅವರ ಅಧಿಕಾರಾವಧಿಯು 2025ರ ಮೇ 13 ರವರೆಗೆ ಇರಲಿದೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಶಿಫಾರಸಿನ ಮೇರೆಗೆ ನ್ಯಾ.ಖನ್ನಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಅಧಿಕೃತವಾಗಿ ಪ್ರಕಟಿಸಿತ್ತು.

1960ರ ಮೇ 14ರಂದು ಜನಿಸಿರುವ ಸಂಜೀವ್‌ ಖನ್ನಾ ಅವರು ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. 2005ರಲ್ಲಿ ಅವರು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು. ನಂತರ, 2006ರಲ್ಲಿ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2019ರ ಜನವರಿ 18ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು.

ಸಂಜೀವ್ ಖನ್ನಾ ಅವರು, ದೇಶದ ಗಮನ ಸೆಳೆದ 1973ರ ಐತಿಹಾಸಿಕ ಕೇಶವಾನಂದ ಭಾರತಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ಎಚ್‌.ಆರ್‌ ಖನ್ನಾ ಅವರ ಸೋದರಳಿಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.