ಚಂಡೀಗಢ: ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ಹಾಗೂ ಪಾಕಿಸ್ತಾನ ಮೂಲದ ದರೋಡೆಕೋರ ಹರ್ವಿಂದರ್ ಸಿಂಗ್ ರಿಂಡಾ ಜಂಟಿಯಾಗಿ ನಿರ್ವಹಿಸುತ್ತಿದ್ದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕ ಮೇಲೆ ದಾಳಿ ನಡೆಸಿರುವ ಪಂಜಾಬ್ ಪೊಲೀಸರು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ ಕುರಿತು ಖಚಿತ ಮಾಹಿತಿ ಆಧರಿಸಿ ಗುರುವಾರ ದೆಹಲಿ ಪೊಲೀಸ್ ವಿಶೇಷ ದಳ ಹಾಗೂ ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಆರೋಪಿಗಳಿಂದ ಒಂದು ಎಕೆ -47 ರೈಫಲ್ ಮತ್ತು ಮೂರು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.
ಲಖ್ಬೀರ್ ಸಿಂಗ್ ಎಂಬಾತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ಜೊತೆ ಕೈಜೋಡಿಸಿರುವ ಹರ್ವಿಂದರ್ ಸಿಂಗ್‌ನ ಆಪ್ತ ಸಹಾಯಕ. ಈ ಇಬ್ಬರು ಐಎಸ್‌ಐ ಜತೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಪಂಜಾಬ್ ಪೊಲೀಸರು ಹೇಳಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.