ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬದಲಾಯಿಸಿದ್ದಾರೆ.
ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲು ಕೆಸಿಆರ್ ಸಜ್ಜಾಗಿದ್ದಾರೆ.
ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮರುನಾಮಕರಣದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ, ಕೆಸಿಆರ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.
ಟಿಆರ್‌ಎಸ್ ಇನ್ನು ಮುಂದೆ ಬಿಆರ್‌ಎಸ್ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ. 'ರಾಷ್ಟ್ರೀಯ ನಾಯಕ ಕೆಸಿಆರ್ ಜಿಂದಾಬಾದ್' ಇತ್ಯಾದಿ ಜಯಘೋಷವನ್ನು ಬೆಂಬಲಿಗರು ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.