ADVERTISEMENT

ಮಧ್ಯಪ್ರದೇಶ: ಮೋಹನ್ ಯಾದವ್ ಸಂಪುಟಕ್ಕೆ 28 ಮಂದಿ ಸೇರ್ಪಡೆ

ಪಿಟಿಐ
Published 25 ಡಿಸೆಂಬರ್ 2023, 11:22 IST
Last Updated 25 ಡಿಸೆಂಬರ್ 2023, 11:22 IST
   

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ, ಕೇಂದ್ರದ ಮಾಜಿ ಸಚಿವ ಪ್ರಹ್ಲಾದ್ ಪಟೇಲ್ ಸೇರಿದಂತೆ ಒಟ್ಟು 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಂಗೂಭಾಯ್ ಪಟೇಲ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

28 ಮಂದಿ ಪೈಕಿ 18 ಮಂದಿ ಸಂಪುಟ ದರ್ಜೆ ಸಚಿವರಾಗಿ, 10 ಮಂದಿ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 

ADVERTISEMENT

ಮಧ್ಯಪ್ರದೇಶ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಡಿಸೆಂಬರ್ 13ರಂದು ಮೋಹನ್ ಯಾದವ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.