ಚೆನ್ನೈ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಚೆನ್ನೈನ ಕಲಾಕ್ಷೇತ್ರ ಫೌಂಡೇಶನ್ ರುಕ್ಮಿಣಿ ದೇವಿ ಕಲಾ ಕಾಲೇಜಿನ ನೃತ್ಯ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನೃತ್ಯ ಕಲಿಸುವ ಪ್ರೊಫೆಸರ್ ಹರಿ ಪದ್ಮನ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇದೇ ಕಾಲೇಜಿನ ಇನ್ನೂ ಮೂವರು ಅಧ್ಯಾಪಕರು ಆರೋಪಿಗಳಾಗಿದ್ದು, ಇವರ ವಿರುದ್ಧವೂ ಲೈಂಗಿಕ ಕಿರುಕುಳ ಆರೋಪದ ಪ್ರಕರಣ ದಾಖಲಾಗಿದೆ. ಈ ಮೂವರಿಗೂ ಕಾಲೇಜಿನ ಆವರಣಕ್ಕೆ ಪ್ರವೇಶ ನೀಡಬಾರದು ಎಂದು ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಎ.ಎಸ್. ಕುಮಾರಿ ಅವರು ಕಲಾಕ್ಷೇತ್ರ ಕಾಲೇಜಿನ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.