ಚೆನ್ನೈ: ಕಮಲ್ ಹಾಸನ್ ಸಿನಿಮಾದಲ್ಲಿ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯ. ನಿಜ ಜೀವನದಲ್ಲಿ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ನೇತಾರ, ತಮಿಳುನಾಡು ಸಹಕಾರ ಸಚಿವ ಸೆಲ್ಲೂರ್ ಕೆ ರಾಜು ಹೇಳಿದ್ದಾರೆ.
ಮಕ್ಕಳ್ ನೀಧಿ ಮಯ್ಯಮ್ (ಎಂಎನ್‌ಎಂ) ಸಂಸ್ಥಾಪಕ ಕಮಲ್ ಹಾಸನ್ ಅವರು ತಮ್ಮ ಪಕ್ಷವನ್ನು ಇತರ ರಾಜ್ಯ ಮತ್ತು ಪ್ರದೇಶಗಳಿಗೆವಿಸ್ತರಿಸುವ ಬಗ್ಗೆ ರಾಜು ಅವರಲ್ಲಿ ಕೇಳಿದಾಗ, ತಮಿಳುನಾಡು ಎಂದಿಗೂ ಕಮಲ್ ಅವರನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.
ಕಮಲ್ ಹಾಸನ್ ಅವರು ಉತ್ತಮ ನಟ. ಆದಾಗ್ಯೂ, ಅವರನ್ನು ಜನರು ಸ್ವೀಕರಿಸಲು ತಯಾರಿಲ್ಲ ಎಂದು ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶದಿಂದ ತಿಳಿಯುತ್ತದೆ ಎಂದಿದ್ದಾರೆ ರಾಜು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.